ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಬೈಕ್ ವೊಂದು ಅಪಘಾತವಾದ ಘಟನೆ ತಾಲೂಕಿನ ಯಂಕಂಚಿ ಗ್ರಾಮದ ಸೇತುವೆ ಹತ್ತಿರ ಸೋಮವಾರ ನಡೆದಿದೆ. ಸೇತುವೆಗೆ ಡಿಕ್ಕಿ ಹೊಡೆದ ಬೈಕ್ ಹಳ್ಳಕ್ಕೆ ಬಿದ್ದಿದೆ. ಬೈಕ್ ಸವಾರ ಯಂಕಂಚಿ ಗ್ರಾಮದವನು ಎಂದು ಹೇಳಲಾಗುತ್ತಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ.