ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): 78ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ(har ghar tiranga) ನಡೆಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅದರಂತೆ ಪ್ರತಿ ಮನೆ ಮೇಲೂ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಅದರಂತೆ ಬುಧವಾರ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು. ಇದರಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
ಸಾಯಂಕಾಲ 5 ಗಂಟೆಗೆ ಬಸವೇಶ್ವರ ವೃತ್ತದ ಹತ್ತಿರ ಸೈಕಲ್, ಬೈಕ್ ಜಾಥಾಗೆ ಶಾಸಕ ಅಶೋಕ(Ashok Managuli) ಮನಗೂಳಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಸಿಪಿಐ ನಾನಾಗೌಡ ಪೊಲೀಸ್ ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಸೇರಿ ಅನೇಕರು ಚಾಲನೆ ನೀಡಿದರು. ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
ಬಸವೇಶ್ವರ ವೃತ್ತದಿಂದ ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಹಾಯ್ದು ಪುನಃ ಬಸವೇಶ್ವರ ವೃತ್ತಕ್ಕೆ ಬಂದು ಜಾಥಾ ಮುಕ್ತಾಯಗೊಳಿಸಲಾಯಿತು. ಸೈಕಲ್ ಹಾಗೂ ಬೈಕ್ ಎರಡಕ್ಕೂ ಅವಕಾಶ ಇದ್ದಿದ್ದರಿಂದ ಎಲ್ಲರೂ ತಮ್ಮ ವಾಹನಗಳಿಗೆ ತ್ರಿವರ್ಣ ಧ್ವಜ ಕಟ್ಟಿಕೊಂಡು ದೇಶದ ಪರ ಘೋಷಣೆ ಕೂಗುತ್ತಾ ಸಾಗಿದರು.