ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲೆಯ ಸಿಂದಗಿ ತಾಲೂಕಿನ ಪಟ್ಟಣದ ವ್ಯಾಪ್ತಿಯಲ್ಲಿ ವಸತಿ ನಿಲಯ ನಿರ್ಮಿಸಲು ಸರ್ವೇ ನಂಬರ್ 751ರಲ್ಲಿ 2 ಎಕರೆ ಜಮೀನು ಮಂಜೂರು ಮಾಡಲು ಉದ್ದೇಶಿಸಿದ್ದು, ಈ ಬಗ್ಗೆ ಆಕ್ಷಪಣೆಗಳು ಇದ್ದರೆ 30 ದಿನಗಳೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಟ್ಟಡ ಹಾಗೂ ಕಾರ್ಮಿಕ ಮತ್ತು ಇತರೆ ಕಾರ್ಮಿಕ ಮಂಡಳಿ ವತಿಯಿಂದ ಕಾರ್ಮಿಕ ಮಕ್ಕಳ 6ನೇ ತರಗತಿಯಿಂದ 12ನೇ ತರಗತಿವರೆಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಟಿಯಿಂದ ವಸತಿ ನಿಲಯ ನಿರ್ಮಿಸಲು ಜಾಗ ಮಂಜೂರಿನ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.