ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನಕ್ಕೆ ಪಟ್ಟಣದಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದ ಶಾಸಕ ಅಶೋಕ ಮನಗೂಳಿ, ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಸರಳ ಹಾಗೂ ಸಜ್ಜನಿಕೆ ರಾಜಕಾರಣಿಯಾಗಿದ್ದರು ಎಂದು ಹೇಳಿದರು.
ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಮಾತನಾಡಿದರು. ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ್ ಸುಂಬಡ, ಜಿಲ್ಲಾ ಕೆಡಿಪಿ ಸದಸ್ಯರಾದ ಶಿವಣ್ಣ ಕೊಟರಗಸ್ತಿ, ನೂರ್ ಅಹ್ಮದ್ ಅತ್ತರ, ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ನಾಯ್ಕೋಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.




