ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಮನ್ನಾಪುರ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಸವಾರ ಅದೃಷ್ಟವಶಾತ್ ಪರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಎಂದು ತಿಳಿದು ಬಂದಿದೆ. ಯಂಕಂಚಿಯಿಂದ ಸಿಂದಗಿ ಕಡೆ ಹೊರಟಿದ್ದ ಬೈಕ್ ಹಾಗೂ ಮನ್ನಾಪುರದಿಂದ ಯಂಕಂಚಿ ಕಡೆ ಹೊರಟಿದ್ದ ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.
ಸುಂಗಠಾಣ ಹಾಗೂ ಮದಭಾವಿ ಗ್ರಾಮದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್ ಗಾಗಿ ಕಾದರೂ ಬರದೆ ಹೋದಾಗ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.