Ad imageAd image

ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಸಿಂಗ್ ಅನ್ವರ್ಥ: ಸಿಎಂ ಸಿದ್ದರಾಮಯ್ಯ

Nagesh Talawar
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಸಿಂಗ್ ಅನ್ವರ್ಥ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಲವು ನೆನಪುಗಳನ್ನು ಮಾಡಿಕೊಳ್ಳುವ ಮೂಲಕ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ನನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ ಎಂದಿದ್ದಾರೆ.

ಅಪಾರ ಜ್ಞಾನದೃಷ್ಟಿಯ ಆಲೋಚನೆ ಹಾಗೂ ಸಾಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಕೋಟ್ಯಾಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿದೆ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.

WhatsApp Group Join Now
Telegram Group Join Now
Share This Article