ಪ್ರಜಾಸ್ತ್ರ ಸುದ್ದಿ
ಉಜಿರೆ(Ujire): ಧರ್ಮಸ್ಥಳದಲ್ಲಿ ನಡೆದಿವೆ ಎಂದು ಹೇಳಲಾಗುತ್ತಿರುವ ಅಪರಾಧಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು, ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ. ಸಾಕ್ಷಿ ದೂರುದಾರ ನೀಡಿರುವ ಹೇಳಿಕೆ ನೀಡಿರುವ ಮಾಹಿತಿ ಹಿನ್ನಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಮಾಹಿತಿ ಪಡೆಯಲು ಇಲ್ಲಿಗೆ ಭೇಟಿ ನೀಡಿದ್ದಾರೆ.
ಈ ವೇಳೆ ಸಾಕ್ಷಿ ದೂರುದಾರ ಚಿನ್ನಯ್ಯ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಪೊಲೀಸರು ಮನೆಗೆ ತೆರಳಿದ್ದಾರೆ. ಇಲ್ಲಿ ಮಾಧ್ಯಮದವರನ್ನು ನಿರ್ಬಂಧಿಸಲಾಗಿದ್ದು, 1 ಕಿಲೋ ಮೀಟರ್ ದೂರದಲ್ಲಿ ಮಾಧ್ಯಮದವರನ್ನು ತಡೆಹಿಡಲಾಗಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿದೆ.