ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ(CPIM) ಸೀತಾರಾಮ್ ಯೆಚೂರಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನ್ಯುಮೋನಿಯಾ ಮಾದರಿಯ ಎದೆ ಸೋಂಕಿನ ಚಿಕಿತ್ಸೆ ಸಲುವಾಗಿ ಆಗಸ್ಟ್ 19ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 72 ವರ್ಷದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.