Ad imageAd image

ಬುಧವಾರ ಹುಟ್ಟೂರಿನಲ್ಲಿ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ(92) ಮಂಗಳವಾರ ನಸುಕಿನಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಸದಾಶಿವನಗರದಲ್ಲಿರುವ

Nagesh Talawar
ಬುಧವಾರ ಹುಟ್ಟೂರಿನಲ್ಲಿ ಎಸ್.ಎಂ ಕೃಷ್ಣ ಅಂತ್ಯಕ್ರಿಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ(92) ಮಂಗಳವಾರ ನಸುಕಿನಜಾವ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗುತ್ತಿದೆ. ಇಡೀ ದಿನ ರಾಜಕೀಯ ಸೇರಿ ಇತರೆ ಕ್ಷೇತ್ರದ ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕಾಗಿ ಪೊಲೀಸ್ ಭದ್ರತೆ ನೀಡಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಅವರು ಮನೆಗೆ ಭೇಟಿ ನೀಡಿದ್ದು, ಸೂಕ್ತ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ರಾಜಕೀಯದ ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿದ ಎಸ್.ಎಂ ಕೃಷ್ಣ ಅವರ ಅಂತಿಮ ದರ್ಶನಕ್ಕೆ ಗಣ್ಯಾತಿಗಣ್ಯರು ಬರುವ ಹಿನ್ನಲೆಯಲ್ಲಿ ಮನೆಯ ಸುತ್ತಮುತ್ತ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಬುಧವಾರ ಹುಟ್ಟೂರಿನಲ್ಲಿ ಅಂತ್ಯಕ್ರಿಕೆ: ಇಂದು ಇಡೀ ದಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಬುಧವಾರ ಮುಂಜಾನೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಒಡನಾಡಿ, ಸಂಬಂಧಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಬರುವುದು ತಡವಾಗುವ ಹಿನ್ನಲೆಯಲ್ಲಿ ನಾಳೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

WhatsApp Group Join Now
Telegram Group Join Now
Share This Article