ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಇದರ ಜೊತೆಗೆ ಬುಧವಾರ ಸರ್ಕಾರಿ ಶಾಲಾ, ಕಾಲೇಜುಗಳು ಸೇರಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೂರು ದಿನ ಶೋಕಾಚರಣೆ ಹಿನ್ನಲೆಯಲ್ಲಿ ಯಾವುದೇ ಸರ್ಕಾರಿ ಮನರಂಜನೆ ಕಾರ್ಯಕ್ರಮಗಳು ಇರುವುದಿಲ್ಲವೆಂದು ತಿಳಿಸಲಾಗಿದೆ.
ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗವುದು. ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮುಂಜಾನೆ 10.30ಕ್ಕೆ ಮಂಡ್ಯದ ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ನಂತರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.