ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣನ ಸ್ನೇಹಿತರೆಂದು ಹೇಳಿಕೊಂಡು ಇಬ್ಬರು ಎರಡು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿದ್ದರು. ಪ್ರಕರಣ ಮುಚ್ಚಿಹಾಕಲು ಹಣದ ಬೇಡಿಕೆ ಇಟ್ಟಿದ್ದರು. ಮೂರು ದಿನಗಳ ಹಿಂದೆ ಇಬ್ಬರು ಬಂದು ಬೆದರಿಕೆ ಹಾಕಿದ್ದಾರೆ. ಈತ ಬ್ಲಾಕ್ ಮೇಲರ್ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಸ್ನೇಹಮಯಿ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಶನಿವಾರ ಕಾಂಗ್ರೆಸ್ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದೆ.
ಸ್ನೇಹಿಮಯಿ ಕೃಷ್ಣ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ 44 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 22ರಲ್ಲಿ ಎಫ್ಐಆರ್ ಆಗಿದೆ. ರೌಡಿ ಶೀಟರ್ ಆಗಿದ್ದರೂ ಕಳೆದ ಮೂರು ವರ್ಷಗಳಿಂದ ಅವನ ಮೇಲೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಭಾನುವಾರ ಮುಂಜಾನೆ 10 ಗಂಟೆಯೊಳಗೆ ಎಫ್ಐಆರ್ ದಾಖಲಿಸಿ ಆತನನ್ನು ಬಂಧಿಸಬೇಕು. ಇಲ್ಲದಿದ್ದರೆ ಠಾಣೆ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ದಿನನಿತ್ಯ ಬಂದು ತನಿಖಾಧಿಕಾರಿಗಳ ಮೇಲೆ ಒತ್ತಡ ಹಾಕುವುದು, ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವುದು ಮಾಡುತ್ತಿದ್ದಾರೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ನಕಲಿ ಸಿಕ್ಕಾ ಹಾಕಿಕೊಂಡು ನಿತ್ಯ ಬಂದು ಹೆಚ್ಚುವರಿ ದಾಖಲೆ ಎಂದು ಕೊಡುತ್ತಿದ್ದಾರೆ. ಸಾಕ್ಷಿ ನಾಶ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಮೇಲೆ ಆರೋಪಿಸಿದ್ದಾರೆ. ಅದಕ್ಕಾಗಿ ನನ್ನ ಕಳಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು. ಈ ಬಗ್ಗೆ ಕೋರ್ಟ್ ಗಮನಕ್ಕೂ ತರಬೇಕು. ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಬಿಜೆಪಿ, ಜೆಡಿಎಸ್ ಇದೆ ಆರೋಪಿಸಿದರು.