ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ನಕಲಿ ದಾಖಲೆ ಹಾಗೂ ಆಡಿಯೋ ಕ್ಲಿಪ್ ಹಾಕಿ ಅಪಪ್ರಚಾರ ಮಾಡಿದ್ದಾರೆ ಎಂದು ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ನೀಡಿದ ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ನೇಹಮಯಿ ಕೃಷ್ಣ ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ಫೋಟೋ, ನಕಲಿ ದಾಖಲೆಗಳು ಹಾಗೂ ಧ್ವನಿ ಮುದ್ರಣ ಹಂಚಿಕೊಳ್ಳುವ ಮೂಲಕ ಅಪಪ್ರಚಾರ ಮಾಡಿದ್ದಾರೆ ಎಂದು ಹೇಳಿ ಡಿ.ಬಿ ನಟೇಶ್ ದೂರು ನೀಡಿದ್ದರು. ಇನ್ನು ಮೈಸೂರಿನ ಭೈರವೇಶ್ವರ ನಗರದಲ್ಲಿರುವ ಇವರ ಕಚೇರಿ ಹಾಗೂ ಮನೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.




