Ad imageAd image

ಸಮಾನತೆಗಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Nagesh Talawar
ಸಮಾನತೆಗಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ ಎಂದರು.

ಡಾ.ಬಿ.ಆರ್‌. ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇಬೇಕು ಎಂದು ಹೇಳಿದ್ದರು. ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು, ಸಮಾನ ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಸುಮಾರು 2 ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿದೆ. 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10 ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article