ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಸರ್ಕಾರ ಅಭಿಪ್ರಾಯಗಳನ್ನು ಆಯೋಗಕ್ಕೆ ತಿಳಿಸಲಾಗಿದೆ. ಅಂತಿಮ ತೀರ್ಮಾನ ಆಯೋಗ ತೆಗೆದುಕೊಳ್ಳುತ್ತೆ. ಸರ್ಕಾರ ಸೆಪ್ಟೆಂಬರ್ 22ರಂದು ಸಮೀಕ್ಷೆ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.
ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸುತ್ತೇವೆ ಎಂದು ಸಚಿವರಿಗೆ ಹೇಳಲು ಸೂಚಿಸಲಾಗಿದೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಎಲ್ಲ ಗೊಂದಲಗಳನ್ನು ಸರಿಪಡಿಸಿ ಸಮೀಕ್ಷೆ ನಡೆಸುತ್ತೇವೆ. ವರ್ಣಮಾಲೆ ಆಧಾರದ ಮೇಲೆ ಜಾತಿಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆಗೆ ಹೋಗಿ ಮಾಹಿತಿ ಸಂಗ್ರಹಿಸಲಾಗುವುದು ಎಂದರು.