ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಸಾಮಾಜಿಕ ಹೋರಾಟಗಾರ, ಕರ್ನಾಟಕ ರಣಧೀರ ಪಡೆಯ ಉತ್ತರ ವಲಯ ಅಧ್ಯಕ್ಷ ಸಂತೋಷ ಮಣಿಗಿರಿ ಅವರ ಸಾಮಾಜಿಕ ಸೇವೆ ಗುರುತಿಸಿ ರಾಜ್ಯಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ ನೀಡಲಾಗಿದೆ. ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ ಬಣ) ಗ್ರಾಮ ಶಾಖೆಯಿಂದ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹಲವು ವರ್ಷಗಳಿಂದ ಕನ್ನಡಪರ, ರೈತಪರ, ದಲಿತಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆ, ಚಳವಳಿ, ಹೋರಾಟಗಳಲ್ಲಿ ಭಾಗವಹಿಸಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಸಂತೋಷ ಮಣಿಗಿರಿ ಅವರ ಸಾಮಾಜಿಕ ಸೇವೆ ಗುರುತಿಸಿ ಸ್ಪೂರ್ತಿಕದಾಯಕ ವ್ಯಕ್ತಿ ಪ್ರಶಸ್ತಿ ಸಂದಿದೆ. ಇದಕ್ಕೆ ಕುಟುಂಬಸ್ಥರು, ಸ್ನೇಹಿತರು, ಹೋರಾಟದ ಒಡನಾಡಿಗಳು ಶುಭ ಕೋರಿದ್ದಾರೆ.