ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಆರೋಪ ಪಟ್ಟಿಯಲ್ಲಿ ಸ್ಯಾಮ್ ಪಿತ್ರೊಡಾ, ಸುಮನ್ ದುಬೆ ಹೆಸರು ಇದೆ ಎಂದು ಸುದ್ದಿ ಸಂಸ್ಥೆಯೊಂದು ತಿಳಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆರೋಪ ಪಟ್ಟಿಯನ್ನು ಅಂಗೀಕರಿಸುವ ಸಂಬಂಧ ಮುಂದಿನ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್ ನಾಯಕರನ್ನು ಸಂಕಷ್ಟಕ್ಕೆ ತರುತ್ತಾ ಅನ್ನೋ ಪ್ರಶ್ನೆ ಮೂಡಿದೆ.