ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡ ಹಾಡು ಎಂದು ಕೇಳಿದ್ದಕ್ಕೆ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪ ಮಾಡಿ ಕನ್ನಡಿಗರಿಗೆ ಅವಮಾನ ಮಾಡಿದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬ್ಯಾನ್ ನಿರ್ಧಾರ ತೆಗೆದುಕೊಂಡಿದೆ. ಸಂಗೀತ ನಿರ್ದೇಶಕರು, ನಿರ್ದೇಶಕರು, ನಿರ್ಮಾಪಕರು ಸಂಘ ಸೇರಿದಂತೆ ಅಂಗ ಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ಕೆಎಫ್ ಸಿಸಿ ಅಧ್ಯಕ್ಷ ನರಸಿಂಹಲು.ಎಂ ಹೇಳಿದ್ದಾರೆ.
ಸೋನು ನಿಗಮ್ ಅವರನ್ನು ಹಾಡಲು ಯಾರೂ ಕರೆಸಬಾರದು. ಯಾವುದೇ ಸಂಗೀತ ಕಾರ್ಯಕ್ರಮಗಳಿಗೆ ಆಹ್ವಾನಿಸಬಾರದು. ಅವರು ವಿಡಿಯೋದಲ್ಲಿ ಕ್ಷಮೆ ಕೇಳಬಹುದು ಎಂದುಕೊಂಡಿದ್ದೇವು. ಆದರೆ, ಅವರು ಕ್ಷಮೆ ಕೇಳಿಲ್ಲ. ಕ್ಷಮೆ ಕೇಳದಿದ್ದರೆ ಅವರ ಮೇಲೆ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಮೂರ್ನಾಲ್ಕು ದಿನಗಳ ಬಳಿಕ ಮತ್ತೊಂದು ಸಭೆ ಮಾಡಿ ನಿರ್ಧರಿಸಲಿದ್ದೇವೆ ಎಂದಿದ್ದಾರೆ.