ಪ್ರಜಾಸ್ತ್ರ ಸುದ್ದಿ
ರಾಂಚಿ(Ranchi): ಇತ್ತೀಚೆಗೆ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ಹಾಗೂ ಕಾಂಗ್ರೆಸ್ ಮೈತ್ರಿ ಪಡೆಗೆ ಗೆಲುವಾಗಿದೆ. ಜಾರ್ಖಂಡ್ ಮುಕ್ತಿ ಮೋರ್ಚಾದ ನಾಯಕ ಹೇಮಂತ್ ಸೊರೇನ್(Hemant Soren) ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ(Oath) ಸ್ವೀಕರಿಸುತ್ತಿದ್ದಾರೆ. ಈ ಮೂಲಕ 2ನೇ ಬಾರಿಗೆ ಹಾಗೂ ಜಾರ್ಖಂಡ್ ನ 14ನೇ ಮುಖ್ಯಮಂತ್ರಿ ಆಗುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ರಾಂಚಿಯ ಮೊರಬಾಡಿ ಮೈದಾನದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನರೀಕ್ಷೆಯಿದೆ. ಹೀಗಾಗಿ ಸಂಜೆ ಶಾಲೆಯಿಂದ ಬರುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆಯಾಗುವ ಸಾಧ್ಯೆತೆ ಹೆಚ್ಚು. ಇದರಿಂದಾಗಿ ಇಂದು ರಾಂಚಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾರ್ಯಕ್ರಮದಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಭಾಗವಹಿಸಲಿದ್ದಾರೆ.