ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): 2024-25ನೇ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ನಗರದ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಶೇಕಡ 66.14ರಷ್ಟು ರಾಜ್ಯದ ಫಲಿತಾಂಶವಾಗಿದೆ. ಬಾಲಕಿಯರೇ ಇಲ್ಲೂ ಸಹ ಮೇಲುಗೈ ಸಾಧಿಸಿದ್ದಾರೆ.
ಶೇಕಡ 91.12ರಷ್ಟು ಫಲಿತಾಂಶ ಮಾಡಿರುವ ದಕ್ಷಿಣ ಕನ್ನಡ ಪ್ರಥಮ, ಶೇಕಡ 89.96ರಷ್ಟು ಫಲಿತಾಂಶ ಮಾಡಿದ ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದಿದೆ. ಶೇಕಡ 42.43ರಷ್ಟು ಫಲಿತಾಂಶದೊಂದಿಗೆ ಕಲಬುರಗಿ ಕೊನೆಯ ಸ್ಥಾನದಲ್ಲಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.