ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಎಸ್ಎಸ್ಎಲ್ ಸಿ ಪರೀಕ್ಷೆ 1ರ ಫಲಿತಾಂಶವನ್ನು ಪ್ರಕಟಿಸಿದೆ. ಬಾಲಕರು ಶೇಕಡ 91.94ರಷ್ಟು ಪಾಸಾಗಿದ್ದಾರೆ. ಬಾಲಕಿಯರು ಶೇಕಡ 96.18ರಷ್ಟು ಪಾಸಾಗಿದ್ದಾರೆ. ಹೀಗಾಗಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.
ಮಾರ್ಚ್ 18ರಿಂದ ಏಪ್ರಿಲ್ 2ರ ತನಕ ಪರೀಕ್ಷೆಗಳು ನಡೆದಿದ್ದವು. 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 7,24,794 ವಿದ್ಯಾರ್ಥಿಗಳು ಪಾಸಾಗಿದ್ದು, ಶೇಕಡ 91.94ರಷ್ಟು ಫಲಿತಾಂಶವಾಗಿದೆ.




