ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷರಾಗಿರುವ ಬುಳ್ಳಪ್ಪ.ಡಿ ಅವರಿಗೆ ವಿಜಯಪುರದ ತನು ಫೌಂಡೇಶನ್ ನೀಡುವ ‘ತನು ಕನ್ನಡ ಮನ ಕನ್ನಡ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 23ರಂದು ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಶಿಕ್ಷಣ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆಯನ್ನು ಗುರುತಿಸಿ 2025ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಬುಳ್ಳಪ್ಪ.ಡಿ ಇವರಿಗೆ ಪ್ರಶಸ್ತಿ ಸಂದಿರುವುದಕ್ಕೆ ಕುಟುಂಬಸ್ಥರು, ಸಹದ್ಯೋಗಿಗಳು, ಸ್ನೇಹಿತರು, ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.




