ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೀದರ ಜಿಲ್ಲೆ ಚಿಟ್ಟಗುಪ್ಪ ಮೂಲದ ಸಾಹಿತಿ, ಹೋರಾಟಗಾರರಾದ ಸಂಗಮೇಶ.ಎನ್ ಜವಾದಿ ಅವರಿಗೆ ಮಕ್ಕಳ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಬ್ಬನ್ ಪಾರ್ಕ್ ಬಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಫಲಕ, 25 ಸಾವಿರ ನಗದು, ಪ್ರಶಸ್ತಿ ಫಲಕದೊಂದಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವರು, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.