ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಕಾಂಗ್ರೆಸ್ಸಿನ ವಿಧಾನ ಪರಿಷತ್(MLC) ಸದಸ್ಯ ಐವಾನ್(ivan dsouza) ಡಿಸೋಜಾ ಅವರ ಮನೆಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದಿದ್ದಾರೆ. ಇದರಿಂದಾಗಿ ಮನೆಯ ಬಾಗಿಲು, ಕಿಟಿಕಿಗೆ ಹಾನಿಯಾಗಿದೆ. ಪಕ್ಷದ ಕಾರ್ಯಕ್ರಮ ನಿಮಿತ್ತ ಅವರು ಬೆಂಗಳೂರಿಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ನಗರದ ವೆಲೆನ್ಸಿಯಾದಲ್ಲಿ ಇವರ ಮನೆಯಿದೆ.
ರಾತ್ರಿ ಸುಮಾರು 11 ಗಂಟೆಯ ವೇಳೆ ಹೆಲ್ಮೆಟ್ ಧರಿಸಿದ್ದ ಐದಾರು ಜನ ಕಿಡಿಗೇಡಿಗಳು ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಮಾತನಾಡಿದ ಐವಾನ್ ಡಿಸೋಜಾ ಅವರು ರಾಜ್ಯಪಾಲರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳಬೇಕು ಎಂದಿದ್ದರು. ಈ ಸಂಬಂಧ ಬಿಜೆಪಿ(BJP) ಯುವ ಮೋರ್ಚಾ ಹಾಗೂ ಇತರೆ ಸಂಘಟನಗಳು ಪೊಲೀಸರಿಗೆ ದೂರು ನೀಡಿದ್ದವು.