ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ. ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯ ವಿದ್ಯಾರ್ಥಿ 3ನೇ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಟ್ರೇಶ್(16) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಕಟ್ಟಡದಿಂದ ಹಾರಿದ ವಿದ್ಯಾರ್ಥಿಯ ತೆಲೆ ನೆರವಾಗಿ ನೆಲಕ್ಕೆ ಬಡೆದಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದೆ. ಆತ್ಮಹತ್ಯೆಗೆ ಕಾರಣಕ್ಕೆ ಸಧ್ಯಕ್ಕೆ ತಿಳಿದು ಬಂದಿಲ್ಲ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ.




