ಪ್ರಜಾಸ್ತ್ರ ಸುದ್ದಿ
ಶ್ರೀರಂಗಪಟ್ಟಣ(Srirangapattana): ಬೆಂಗಳೂರಿನಲ್ಲಿ ಬಿಬಿಎ ಓದುತ್ತಿರುವ 7 ವಿದ್ಯಾರ್ಥಿಗಳು ಶುಕ್ರವಾರ ಪ್ರವಾಸಕ್ಕೆಂದು ಇಲ್ಲಿನ ಬೆಳಗೊಳ ಹತ್ತಿರದ ಎಡಮುರಿ ಫಾಲ್ಸ್ ಗೆ ಬಂದಿದ್ದಾರೆ. ಈಜಲು ನದಿಗೆ ಇಳಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಸುಳಿಗೆ ಸಿಲುಕಿದ್ದಾರೆ. ಅವರನ್ನು ಸ್ಥಳೀಯರು, ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ವೆಂಕಟೇಶ್ ಹಾಗೂ ವಿಲಿಯಂ ಶ್ಯಾಮ್ ಮೃತ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರಗೆ ತೆಗೆದರು. ಈ ಬಗ್ಗೆ ಕೆಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.