ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಶಾಸಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವರ ಮೊಮ್ಮಗ ಸಮರ್ಥ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಆಪ್ತರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಚನಾವಣಾಧಿಕಾರಿ ಕಚೇರಿಗೆ ತೆರಳಿ ಯಾವುದೇ ಪಕ್ಷದ ಬಿ ಫಾರ್ಮ್ ಇಲ್ಲದೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಟಿಕೆಟ್ ಯಾರಿಗೆ ಅನ್ನೋ ಪ್ರಶ್ನೆಯ ನಡುವೆಯೇ ಈ ಬೆಳವಣಿಗೆ ನಡೆದಿದೆ. ಉಪ ಚುನಾವಣೆಯಲ್ಲಿ ಟಿಕೆಟ್ ನಮ್ಮ ಸಮುದಾಯದವರಿಗೆ ನೀಡಬೇಕು ಎಂದು ಮುಸ್ಲಿಂ ಸಮಾಜದ ಮುಖಂಡರು ಪಟ್ಟು ಹಿಡಿದಿದ್ದಾರೆ. ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥಗೆ ಟಿಕೆಟ್ ಕೊಡಿಸಬೇಕು ಅನ್ನೋ ನಿಟ್ಟಿನಲ್ಲಿ ತೆರೆಮರೆಯ ಕೆಲಸ ಮಾಡುತ್ತಿದ್ದಾರೆ. ಚುನಾವಣೆ ಗೆಲುವಿನ ಜವಾಬ್ದಾರಿಯನ್ನು ಸಹ ಇವರಿಗೆ ನೀಡಿದೆ. ಅಭ್ಯರ್ಥಿ ಯಾರು ಅನ್ನೋದು ಕಗ್ಗಂಟಾಗಿರದ್ದು, ಕಾಂಗ್ರೆಸ್ ಹೈಕಮಾಂಡ್ ಗೂ ಸೆಡ್ಡು ಹೊಡೆದು ನಾಮಪತ್ರ ಸಲ್ಲಿಸಿದ್ದಾರೆ.
ಹೆಸರಿಗೆ ಮಾತ್ರ ಪ್ರಜಾಪ್ರಭುತ್ವ: ಈ ದೇಶದಲ್ಲಿ ರಾಜಕೀಯ ಅಂತಾ ಬಂದರೆ ಹೆಸರಿಗೆ ಮಾತ್ರ ಪ್ರಜಾಪ್ರಭುತ್ವ ಎನಿಸುತ್ತಿದೆ. ಯಾಕಂದರೆ ರಾಜಕೀಯ ಕುಟುಂಬದಿಂದ ಬಂದವರೆ ತಲೆ ಮಾರುಗಳಿಂದ ಅಧಿಕಾರ ಹಿಡಿಯುತ್ತಾ ಹೋಗುತ್ತಿದ್ದಾರೆ. ದಾವಣಗೆರೆಯಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಶಾಸಕರಾಗಿದ್ದರು, ಇವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಸಚಿವರಾಗಿದ್ದಾರೆ. ಇವರ ಪತ್ನಿ ಡಾ.ಪ್ರಭಾ ಸಂಸದೆಯಾಗಿದ್ದಾರೆ. ಅಜ್ಜನ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮೊಮ್ಮಗನನ್ನೇ ತಂದು ಕೂರಿಸುವ ಕೆಲಸ ನಡೆಯುತ್ತಿದೆ. ಈ ಮೂಲಕ ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ದೊಡ್ಡ ಮಟ್ಟದಲ್ಲಿ ಬೇರು ಬಿಡುತ್ತಿದೆ.




