Ad imageAd image

ವಿಜಯಪುರವನ್ನು ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿದ ಸುಧಾಮೂರ್ತಿ

ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ಮಂಗಳವಾರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ

Nagesh Talawar
ವಿಜಯಪುರವನ್ನು ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿದ ಸುಧಾಮೂರ್ತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ(sudha murthy) ಅವರು ಮಂಗಳವಾರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರವನ್ನು ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ವಿಜಯಪುರ, ಬಾಗಲಕೋಟೆ ಅವಿಭಜಿತ ಜಿಲ್ಲೆಯೊಂದಿಗೆ ನಮ್ಮ ಪೂರ್ವಜರಿಂದಲೂ ಭಾವನಾತ್ಮಕ ಸಂಬಂಧಿವಿದೆ ಎಂದರು.

ರಾಜ್ಯಸಭೆ ಸದಸ್ಯೆಯಾಗಿರುವುದರಿಂದ ದೇಶದ ಯಾವುದೇ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು. ವಿಜಯಪುರ ಜಿಲ್ಲೆಯ ಮೇಲೆ ವಿಶೇಷ ಪ್ರೀತಿಯಿರುವುದರಿಂದ ನೋಡಲ್ ಜಿಲ್ಲೆಯಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಅಲ್ಲದೆ ನಾನು ಕರ್ನಾಟಕದವಳು, ಕನ್ನಡತಿ ಎಂದರು. ಜಿಲ್ಲಾಸ್ಪತ್ರೆಯಲ್ಲಿ ಧರ್ಮಶಾಲೆ ನಿರ್ಮಾಣ ಮಾಡುವ ಉದ್ದೇಶವಿದೆ. ರೋಗಿಗಳು ಹಾಗೂ ಸಂಬಂಧಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಇದನ್ನು ನಿರ್ಮಿಸುವ ಉದ್ದೇಶವಿದೆ. ಜಿಲ್ಲಾಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದರು.

ದೇಶದಲ್ಲಿ ವಿಶ್ವಪ್ರಸಿದ್ಧ 57 ತಾಣಗಳಿವೆ. ಇದರಲ್ಲಿ 42 ತಾಣಗಳು ಮಾತ್ರ ಯುನೆಸ್ಕೊ ಪಟ್ಟಿಗೆ ಸೇರ್ಪಡೆಯಾಗಿವೆ. ಗೋಳುಗುಮ್ಮಜ್, ಇಗ್ರಾಹಿಂರೋಜಾ ಸಹ ಯುನೆಸ್ಕೊಗೆ ಸೇರಲು ಅರ್ಹವಾಗಿವೆ ಎಂದರು. ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಸಿಇಒ ರಿಷಿ ಆನಂದ್ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article