ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangalore): ಹಿಂದೂ ಕಾರ್ಯಕರ್ತರ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ 8 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದು 24 ಗಂಟೆಯಲ್ಲಿ ಶಂಕಿತರ ಬಂಧನವಾಗಿದೆ. ಇದಕ್ಕಾಗಿ 5 ತಂಡಗಳನ್ನು ರಚನೆ ಮಾಡಲಾಗಿತ್ತು. ಆರೋಪಿಗಳು ಮಂಗಳೂರಿನಲ್ಲಿಯೇ ಅಡಗಿ ಕುಳಿತಿದ್ದರು. ಅವರನ್ನು ಬಂಧಿಸಲಾಗಿದೆ.
ಇಂದು ಮುಂಜಾನೆ 11 ಗಂಟೆಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹ ಭಾಗವಹಿಸಲಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿಗಳು ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದರು.