ಪ್ರಜಾಸ್ತ್ರ ಸುದ್ದಿ
ಮಂಗಳೂರು(Magaloru): ರೌಡಿ ಶೀಟರ್, ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ ಬಜಪೆಯ ಕಿನ್ನಿಪದವಿನಲ್ಲಿ ತಲ್ವಾರನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಐದಾರು ಜನರು ಪಿಕಪ್ ಹಾಗೂ ಕಾರಿನಲ್ಲಿ ಬಂದು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಈ ವೇಳೆ ಸುಹಾಸ್ ಸಹಚರರಾದ ಅನ್ವಿತ್, ಪ್ರಜ್ವಲ್, ಸಂಜಯ್, ಶಶಾಂಕ್ ಹಾಗೂ ಲತೀಶ್ ಗಾಯಗೊಂಡಿದ್ದಾರೆ. ಸುಹಾಸ್ ಮೇಲೆ ಎರಡು ಕೊಲೆ ಪ್ರಕರಣ ಸೇರಿದಂತೆ ಐದು ಪ್ರಕರಣಗಳಿವೆ.
ಇತನ ಕೊಲೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ ಖಾದರ್ ಮಾತನಾಡಿದ್ದು, ಹಂತಕರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗುವುದು. ಶಾಂತಿ ಕದಡಂತೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದಿದ್ದಾರೆ.
ಇನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದು ಅತ್ಯಂತ ಆಘಾತಕಾರಿ ಘಟನೆ. ಇದರಿಂದ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಇದು ಹಳೆ ದ್ವೇಷದಂತೆ ಕಂಡರೂ ಕರಾವಳಿ ಭಾಗದಲ್ಲಿ ಶಾಂತಿ ಕದಡುವುದು ಆಗಿದೆ. ಈ ಪ್ರಕರಣದಲ್ಲಿ ಯಾರ ಓಲೈಕೆ, ತುಷ್ಟೀಕರಣವಿಲ್ಲ. ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಅಂತಾ ಹೇಳಿದ್ದಾರೆ.