ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ವಸತಿ ನಿಲಯದ ರೂಮಿನಲ್ಲಿ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಶಕಿನಾ(20) ಅನ್ನೋ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಮೂಲದ ಶಕಿನಾ ಮೈಸೂರಿನಲ್ಲಿ ಬಿಎಸ್ಸಿ 6ನೇ ಸೆಮಿಸ್ಟರಿಯಲ್ಲಿ ಓದುತ್ತಿದ್ದಳು. ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ನೇಹಿತೆಯರು ಸೇರಿದಂತೆ ಎಲ್ಲರಿಗೂ ಶಾಕ್ ಆಗಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರನಲ್ಲಿ ಕೈತೊಳೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ.