ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳಲ್ಲಿ ಓರ್ವ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆ.ಎಂ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರು ಲಾಕ್ ಅಪ್ ಡೆತ್ ಎಂದು ಆರೋಪಿಸಿದ್ದಾರೆ.
ಮದ್ದೂರು ತಾಲೂಕಿನ ದುಂಡನಹಳ್ಳಿಯ ನಿವಾಸಿ ರಮೇಶ್ ಮೃತ ಆರೋಪಿಯಾಗಿದ್ದಾನೆ. ಬೊಮ್ಮನಾಯಕನಹಳ್ಳಿಯ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ರಮೇಶ್, ಮಂಜು ಹಾಗೂ ಕೋಲಾರ ಮೂಲದ ಅನಿಲ್ ಎಂಬುವರನ್ನು ಬಂಧಿಸಲಾಗಿತ್ತು. ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದರು.