ಪ್ರಜಾಸ್ತ್ರ ಸುದ್ದಿ
ಸುಳ್ಯ(Sullya): ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಕಾರಿನಲ್ಲಿದ್ದ ಗೋಣಿಕೊಪ್ಪ ಮೂಲದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸುವಾಗ ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಕೆವಿಜಿ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಮೃತದೇಹಗಳನ್ನು ಇಡಲಾಗಿದೆಯಂತೆ.