ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಬರೋಬ್ಬರಿ 30 ಜನರು ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಭಕ್ತರ ಸುರಕ್ಷತೆ ವಿಚಾರವಾಗಿ ಮಾರ್ಗಸೂಚಿ ಬಿಡುಗಡೆ ಕುರಿತಾಗಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವಕೀಲ ವಿಶಾಲ್ ತಿವಾರಿ ಎಂಬುವರು ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಇದು ಅತ್ಯಂತ ನೋವಿನ ಸಂಗತಿ ಎಂದಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ನೀವು ಅಲಹಾಬಾದ್ ಹೈಕೋರ್ಟ್ ಗೆ ಹೋಗಿ ಎಂದು ಹೇಳಿದೆ. ಈಗಾಗ್ಲೇ ಈ ಬಗ್ಗೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. ಇಲ್ಲಿ ಇದನ್ನು ಅಂಗೀಕರಿಸಬಾರದು ಎಂದು ಉತ್ತರ ಪ್ರದೇಶ ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು.