ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುವುದು ಅಪರಾಧವೇ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದೆ. ಹೈಕೋರ್ಟ್ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅವರು ನಿರ್ದಿಷ್ಟ ಧಾರ್ಮಿಕ ಹೆಸರು, ನುಡಿಗಟ್ಟು ಕೂಗುವುದು ತಪ್ಪೇ ಎಂದು ಕೇಳಿದೆ.
ಮಸೀದಿ ಆವರಣದಲ್ಲಿ ಘೋಷಣೆ ಕೂಗಿದ ಆರೋಪಿಗಳನ್ನು ಪತ್ತೆ ಹಚ್ಚಿದ್ದು ಹೇಗೆ? ಸಿಸಿಟಿವಿ ಇಲ್ಲವೇ ಬೇರೆ ಸಾಕ್ಷಿಗಳ ಮೂಲಕ ಗುರುತು ಪತ್ತೆ ಹಚ್ಚಲಾಗಿದೆಯೇ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್, ಸಂದೀಪ್ ಮೆಹ್ತಾ ಅವರಿದ್ಧ ಪೀಠ ಪ್ರಶ್ನಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿ ಆವರಣದಲ್ಲಿ ಸೆಪ್ಟೆಂಬರ್ 24ರ ರಾತ್ರಿ 10.50ರ ಸುಮಾರಿಗೆ ಅಕ್ರಮವಾಗಿ ಪ್ರವೇಶಿಸಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ ಕೀರ್ತನ್ ಕುಮಾರ್, ಎನ್.ಎಂ ಸಚಿನ್ ಕುಮಾರ್ ಎಂಬುವರ ವಿರುದ್ಧ ಮಸೀದಿ ಸಿಬ್ಬಂದಿ ದೂರು ದಾಖಲಿಸಿದ್ದರು.