ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಇಡಿ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ತೀರ್ಪು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.
ರಾಜಕೀಯ ಹೋರಾಟಗಳು ಚುನಾವಣೆಯಲ್ಲಿ ನಡೆಯಲಿ. ಅದನ್ನು ಇಲ್ಲಿ ಪ್ರದರ್ಶಿಸಬೇಡಿ. ನಿಮ್ಮನ್ನು ಯಾಕೆ ಬಳಸಿಕೊಳ್ಳಬೇಕು. ಇದರ ಬಗ್ಗೆ ನನಗೆ ಮಹಾರಾಷ್ಟ್ರದಲ್ಲಿ ಕೆಲವು ಅನುಭವಗಳಾಗಿವೆ. ನಮಗೆ ಬಲವಂತ ಮಾಡಬೇಡಿ. ಇಲ್ಲದಿದ್ದರೆ ಇಡಿ ಬಗ್ಗೆ ಕಠಿಣ ಟಿಪ್ಪಣಿ ಮಾಡಬೇಕಾದಿತು ಎಂದು ಮುಖ್ಯನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ನೇತೃತ್ವದ ಪೀಠ ಚಾಟಿ ಬೀಸಿದೆ. ಇದರಿಂದಾಗಿ ಮುಖ್ಯಮಂತ್ರಿ, ಇವರ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಖುಷಿಯಾಗಿದೆ.