ಪ್ರಜಾಸ್ತ್ರ ಸುದ್ದಿ
ನವದೆಹಲಿ(New delhi): ಏಷ್ಯ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಡಿಯಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಗುರುವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸೆಪ್ಟೆಂಬರ್ 14ರಂದು ದುಬೈನಲ್ಲಿ ಭಾರತ ಹಾಗೂ ಪಾಕಿಸ್ಥಾನ ನಡುವೆ ಪಂದ್ಯ ನಡೆಯಲಿದೆ. ಇದನ್ನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ನಾಲ್ವರು ಕಾನೂನು ವಿದ್ಯಾರ್ಥಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿ ಹಿನ್ನಲೆಯಲ್ಲಿ ಸಿಂಧೂರ ಹೆಸರಿನ ಆಪರೇಷನ್ ಮೂಲಕ ಪಾಕಿಸ್ತಾನದ ಮೇಲೆ ಭಾರತ ಕಾರ್ಯಾಚರಣೆ ಮಾಡುತ್ತೆ. ಹೀಗಿರುವಾಗ ಭಾರತ ಹಾಗೂ ಪಾಕಿಸ್ಥಾನ ನಡುವೆ ಪಂದ್ಯ ನಡೆಯುವುದು ಸರಿಯಲ್ಲ ಎಂದು ಹೇಳಿ ಅರ್ಜಿ ಸಲ್ಲಿಸಿದರು.