ಪ್ರಜಾಸ್ತ್ರ ಸುದ್ದಿ
ಕಠ್ಮಂಡು(Kathmandu): ನೇಪಾಳದಲ್ಲಿನ ರಾಜಕೀಯ ಪಲ್ಲಟ, ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಪ್ರಧಾನಿಯಾಗಿದ್ದ ಕೆ.ಪಿ ಶರ್ಮಾ ಓಲಿ ಅವರ ತಲೆದಂಡವಾಗಿದೆ. ಇದೀಗ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕಾರ್ಕಿ ಅವರು ಭಾನುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಮಾರ್ಚ್ 5, 2026ರಂದು ನೇಪಾಳದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ನಮ್ಮ ಸರ್ಕಾರ 6 ತಿಂಗಳಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿ ಇರುವುದಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದು ತಿಳಿಸಿದರು. ಸುಶೀಲಾ ಕಾರ್ಕಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯಾಗಿದ್ದಾರೆ. ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.