ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್(Yatnal) ವಿರುದ್ಧ ದೂರು ದಾಖಲಿಸಿದ್ದ ಟಬು ದಿನೇಶ್ ಗುಂಡೂರಾವ್( tabu dinesh gundurao), ಬುಧವಾರ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಏಪ್ರಿಲ್ 6ರಂದು ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಬುಧವಾರ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ್ದಾರೆ.
ನ್ಯಾಯಾಧೀಶ ಎನ್.ಶಿವಕುಮಾರ್ ಅವರ ಮುಂದೆ ಹಾಜರಾದ ಟಬು ದಿನೇಶ್ ಗುಂಡೂರಾವ್, ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಆಗಸ್ಟ್ 7 ಹಾಗೂ 8ರಂದು ಈ ಕುರಿತು ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಕೋರ್ಟ್ ತಿಳಿಸಿದೆ.