ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಡೇಶ್ ಹಂಪಿ ನಿರ್ದೇಶನದ ನಟ ದುನಿಯಾ ವಿಜಯ್, ರಚಿತಾ ರಾಮ್ ಸೇರಿದಂತೆ ಅನೇಕ ತಾರಾಬಳಗ ಇರುವ ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.




