ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾಗೆ ತೆರಳಿರುವ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಗೆದ್ದು ಬೀಗುತ್ತಿದೆ. ಇದರ ನಡುವೆ ಮಂಗಳವಾರ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ದಿಢೀರ್ ಭಾರತಕ್ಕೆ ಬಂದಿದ್ದಾರೆ. ವೈಯಕ್ತಿಕ ತುರ್ತು ಕಾರಣದಿಂದಾಗಿ ಕುಟುಂಬ ಸಮೇತ ವಾಪಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಸಿಸಿಐ ಅನುಮತಿ ಪಡೆದು ಸ್ವದೇಶಕ್ಕೆ ಬಂದಿದ್ದಾರೆ.
ನವೆಂಬರ್ 30ರಂದು ಕ್ಯಾನ್ ಬೆರಾದಲ್ಲಿ 2 ದಿನ ಪಿಂಕ್ ಬಾಲ್ ಅಭ್ಯಾಸ ಪಂದ್ಯ ನಡೆಯಲಿದೆ. ಅದರಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಲಾಗುತ್ತಿದೆ. ಡಿಸೆಂಬರ್ 6ರಂದು ಆಡಿಲೇಡ್ ನಲ್ಲಿ 2ನೇ ಟೆಸ್ಟ್ ಪಂದ್ಯ ನಡೆಯಲಿದೆ. ಅದಕ್ಕೂ ಮೊದಲು ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ. ನಾಳೆ ಭಾರತ ತಂಡ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಆಯೋಜಿಸಿರುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ.