ಪ್ರಜಾಸ್ತ್ರ ಸುದ್ದಿ
ಅಹಮದಾಬಾದ್(Ahmedabad): ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 142 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿ ವಶಪಡಿಸಿಕೊಂಡಿದೆ. ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕ್ಲೀನ್ ಸ್ವಿಪ್ ಸಾಧಿಸಿದೆ. ಭಾರತ ನೀಡಿದ್ದ 357 ರನ್ ಗಳ ಗುರಿಯನ್ನು ಮುಟ್ಟುವಲ್ಲಿ ಜೋಸ್ ಬಟ್ಲರ್ ಬಳಗ ವಿಫಲವಾಗಿದೆ. ಭಾರತದ ಬೌಲರ್ ಗಳ ಎದುರು ಮುಗ್ಗರಿಸಿದ ಇಂಗ್ಲೆಂಡ್ ಪಡೆ 34.2 ಓವರ್ ಗಳಲ್ಲಿ 214 ರನ್ ಗಳಿಗೆ ಆಲೌಟ್ ಆಗಿ ಪರಾಭವಗೊಂಡಿತು.
ಭಾರತ ಪರ ಹರ್ಷದೀಪ್, ಹರ್ಷಿತ್ ರಾಣಾ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯೆ ತಲಾ 2 ವಿಕೆಟ್ ಪಡೆದು ಮಿಂಚಿದರು. ವಾಸಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು. ಸರಣಿ ಪೂರ್ತಿ ಮಿಂಚಿರುವ ಶುಭನಂ ಗಿಲ್ ಸರಣಿ ಶ್ರೇಷ್ಠ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಭರ್ಜರಿ 112 ರನ್ ಗಳಿಸಿ ಮಿಂಚಿದರು. ಅಲ್ಲದೇ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ, ಟೆಸ್ಟ್ ಹಾಗೂ ಟಿ-20 ಮಾದರಿಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.