ಪ್ರಜಾಸ್ತ್ರ ಸುದ್ದಿ
ಗುವಾಹಟಿ(Guvahati): ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲುವ ಮೂಲಕ ಸರಣಿಯನ್ನು ಕಳೆದುಕೊಂಡಿದೆ. ಬರೋಬ್ಬರಿ 408 ರನ್ ಗಳ ಅಂತರದಿಂದ ಗೆದ್ದು 2-0 ಅಂತರದಿಂದ ಸೌಥ್ ಆಫ್ರಿಕಾ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತಕ್ಕೆ ತವರು ನೆಲದಲ್ಲಿಯೇ ದೊಡ್ಡ ಮಟ್ಟದ ಸೋಲಾಗಿದೆ.
ಭಾರತಕ್ಕೆ ಸೌಥ್ ಆಫ್ರಿಕಾ 549 ರನ್ ಗಳ ಗುರಿಯನ್ನು ನೀಡಿತ್ತು. ಆದರೆ, ಕೇವಲ 140 ರನ್ ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 408 ರನ್ ಗಳ ಅಂತರದಿಂದ ಸೋಲು ಅನುಭವಿಸಿದೆ. ಆಲ್ ರೌಂಡರ್ ರವೀಂದ್ರ ಜಡೇಜಾ 54 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿದೆ. ಈ ಗೆಲುವಿನೊಂದಿಗೆ 25 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಸೌಥ್ ಆಫ್ರಿಕಾ ಟೆಸ್ಟ್ ಸರಣಿ ಗೆದ್ದಿದೆ.




