ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಾಕಷ್ಟು ಸದ್ದು ಮಾಡಿದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಪತ್ನಿ ನಿಖಿತಾ ಹಾಗೂ ಆಕೆಯ ತಾಯಿ, ಸಹೋದರನನ್ನು ಬಂಧಿಸಲಾಗಿದೆ ಎಂದು ಮಾರತಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ. ನಿಖಿತಾ ಸಿಂಘಾನಿಯನ್ನು ಹರಿಯಾಣದ ಗುರುಗ್ರಾಮದಲ್ಲಿ, ಈಕೆಯ ತಾಯಿ ನಿಶಾ, ಸಹೋದರ ಅನುರಾಗನನ್ನು ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶದ ಜೋನಾಪುರದಲ್ಲಿರುವ ನಿಖಿತಾ ಮನೆಗೆ ಡಿಸೆಂಬರ್ 13ರಂದು ನೋಟಿಸ್ ಅಂಟಿಸಿ ಬರಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ಮೂವರನ್ನು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಖಾಸಗಿ ಕಂಪನಿಯ ನಿರ್ದೇಶಕ ಅತುಲ್ ಸುಭಾಷ್ ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಸಹೋದರ ನೀಡಿದ ದೂರಿನ ಮೇಲೆ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ.