ಪ್ರಜಾಸ್ತ್ರ ಸುದ್ದಿ
ರಾಂಚಿ(Ranchi): ಜಾರ್ಖಂಡ್ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಪ್ರಧಾನಿ ಮೋದಿ ತೊಡಗಿಸಿಕೊಂಡಿದ್ದಾರೆ. ಪ್ರಚಾರ ಮುಗಿಸಿಕೊಂಡು ವಾಪಸ್ ದೆಹಲಿಗೆ ತೆರಳುವ ಸಂದರ್ಭದಲ್ಲಿ ವಿಮಾನದಲ್ಲಿ ತಾಂತ್ರಿಕ( ದೋಷ ಕಂಡು ಬಂದಿದೆ. ಹೀಗಾಗಿ ದೇವಘರ್ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು.
ಈ ಸಮಸ್ಯೆಯಿಂದಾಗಿ ಅವರು ದೆಹಲಿಗೆ ತೆರಳುವುದು ವಿಳಂಬವಾಗಿದೆ. ವಿಮಾನದಲ್ಲಿನ ತಾಂತ್ರಿಕ ದೋಷಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪ್ರಧಾನಿ ಮೋದಿ ಚುನಾವಣೆ ಪ್ರಚಾರದ ಜೊತೆಗೆ ಬ್ರಿಟಿಷರ್ ವಿರುದ್ಧ ಹೋರಾಡಿದ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ನಮನ ಸಲ್ಲಿಸಿದ್ದಾರೆ.