ಪ್ರಜಾಸ್ತ್ರ ಸುದ್ದಿ
ಪಾಟ್ನಾ(Patna): ಆರ್ ಜೆಡಿ ಯುವ ನಾಯಕ, ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಇಂಡಿಯಾ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಸೀಟು ಹಂಚಿಕೆ ವಿಚಾರದಲ್ಲಿನ ಭಿನ್ನಾಭಿಪ್ರಾಯಗಳ ನಡುವೆ ಜಂಟಿಯಾಗಿ ಮಾಧ್ಯಮಗೋಷ್ಠಿ ನಡೆಸಿ, ತೇಜಸ್ವಿ ಯಾದವ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ.
ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರನ್ನು ಪಾಟ್ನಾಗೆ ಕಳಿಸಿದೆ. ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ತೇಜಸ್ವಿ ಯಾದವ್ ಅವರೊಂದಿಗೆ ಚರ್ಚೆ ನಡೆಸಿದರು. ನಾವು ಚುನಾವಣೆಗೆ ಒಟ್ಟಾಗಿ ಸಜ್ಜಾಗಿದ್ದೇವೆ ಅನ್ನೋ ಸಂದೇಶವನ್ನು ನೀಡಲಾಗಿದೆ. ಈ ಮೂಲಕ ಯುವ ನಾಯಕನಿಗೆ ಸಿಎಂ ಪಟ್ಟ ಕಟ್ಟಲು ಮುಂದಾಗಿದೆ. ಆದರೆ, ಬಿಜೆಪಿ ಹಾಗೂ ಮೈತ್ರಿಕೂಟ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಮತದಾರರು ಈ ಬಾರಿ ಯಾರ ಕೈ ಹಿಡಿಯುತ್ತಾರೆ ಅನ್ನೋ ಕುತೂಹಲವಿದೆ.