ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ ನಾಯಕ ನಿಧನರಾಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಹಿರಿಯ ನಟ ನಾಗೇಂದ್ರ ಶಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆರ್ಥಿಕ ಸಹಾಯ ಮಾಡಿ ಎಂದು ಧಾರವಾಹಿ ಹಾಗೂ ಸಿನಿಮಾ ಮಂದಿಗೆ ಹೇಳಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಕೌಟುಂಬಿಕ ಸಮಸ್ಯೆಗಳ ಕುರಿತು ಚರ್ಚೆಗೆ ಕಾರಣವಾಗಿತ್ತು. ಮಂಗಳ ಗೌರಿ, ಪಾರು ಧಾರವಾಹಿಗಳಲ್ಲಿ ನಟಿಸಿದ್ದ ಶ್ರೀಧರ್ ನಾಯಕ ಖ್ಯಾತಿ ಗಳಿಸಿದ್ದರು. ಕೆಲ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.