ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಟ ದರ್ಶನ್ ಈಗಾಗ್ಲೇ ಕೊಲೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಬಂದಿದ್ದು, ಆ ಪ್ರಕರಣವೇ ಇನ್ನೂ ನ್ಯಾಯಾಲಯದ ಅಂಗಳದಲ್ಲಿದೆ. ಹೀಗಾಗಿ ಜಾಮೀನಿನ ಮೇಲೆ ನಟ ದರ್ಶನ್ ಹೊರಗೆ ಇದ್ದಾರೆ. ಇದರ ನಡುವೆ ನಟಿ, ಮಾಜಿ ಸಂಸದೆ ರಮ್ಯಾಗೆ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗುತ್ತಿರುವವರು ಅಶ್ಲೀಲ ಮೆಸೇಜ್ ಮಾಡಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಅನ್ನೋದು ದೊಡ್ಡ ಸದ್ದು ಮಾಡುತ್ತಿದೆ. ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಹ ಸಲ್ಲಿಸಿದ್ದಾರೆ.
ಇನ್ನು ದರ್ಶನ್ ಅಭಿಮಾನಿಗಳು ಹಲ್ಲೆ ಮಾಡಿದ್ದಾರೆ. ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಪ್ರಥಮ್ ಮೇಲೆ ಹೇಳುತ್ತಿದ್ದಾರೆ. ಇದರಿಂದಾಗಿ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ದೊಡ್ಡ ಸದ್ದು ಮಾಡುತ್ತಿದೆ. ಈ ಮೂಲಕ ಮತ್ತೆ ಟೆನ್ಷನ್ ಶುರುವಾಗಿದೆ. ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ್ಯಾರು? ಪ್ರಥಮ್ ಮೇಲೆ ಹಲ್ಲೆ ಮಾಡಿದ್ದು ನಿಜಾನಾ, ಮಾಡಿದ್ದು ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಆದರೆ, ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿರುವ ನಟ ದರ್ಶನಗೆ ಮತ್ತೊಂದು ಸಂಕಷ್ಟ ಎದುರಾಗಿರುವುದು ಮಾತ್ರ ಸತ್ಯ.