ಪ್ರಜಾಸ್ತ್ರ ಸುದ್ದಿ
ಜೈಪುರ(Jaipur): ಗ್ಯಾಸ್ ಟ್ಯಾಂಕರ್ ವೊಂದು ಇತರೆ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. 37 ಜನರು ಗಾಯಗೊಂಡಿದ್ದಾರೆ. ಇಂತಹದೊಂದು ಭೀಕರ ಅಪಘಾತ ಶುಕ್ರವಾರ ಮುಂಜಾನೆ ಜೈಪುರ-ಅಜ್ಮಿರ್ ಹೆದ್ದಾರಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಟ್ರಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಾಕಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಇನ್ನು ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನೆ ಸಂಬಂಧ ಇನ್ನು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.