ಪ್ರಜಾಸ್ತ್ರ ಸುದ್ದಿ
ತುಮಕೂರು(Tumakoru): ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು, ಬೀದಿದೀಪ ಹಾಗೂ ತಡೆಗೋಡೆಗೂ ಡಿಕ್ಕಿ ಹೊಡೆದ ಘಟನೆ ಚಿಕ್ಕನಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಇದರಿಂದಾಗಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸನ್ ರೈಸ್ ಟೂರ್ ಅಂಡ್ ಟ್ರಾವಲ್ಸ್ ಗೆ ಸೇರಿದ ಬಸ್ ಅಪಘಾತವಾಗಿದೆ.
ಗೋವಾ-ಬೆಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ಬಸ್ಸಿನಲ್ಲಿ 29 ಪ್ರಯಾಣಿಕರಿದ್ದರು. ಚಿಕ್ಕನಹಳ್ಳಿ ಹತ್ತಿರ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆ ಮೇಲೆ ಮುಂಜಾನೆ ಸುಮಾರು 4.15ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತುಮಕೂರು, ಶಿರಾ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.