Ad imageAd image

ಸಿಂದಗಿ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ

Nagesh Talawar
ಸಿಂದಗಿ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ನಗರದ ಹೊರವಲಯದ ಕಲಕೇರಿ ಬೈಪಾಸ್ ಹತ್ತಿರ ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಗುರುವಾರ ಮುಂಜಾನೆ ಈ ಒಂದು ಘಟನೆ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಜೀವ ಹಾನಿ ಆಗಿಲ್ಲವೆಂದು ಹೇಳಲಾಗುತ್ತಿದೆ.

ಸಿಂದಗಿಯಿಂದ ಕಲಕೇರಿ ಮಾರ್ಗದ ಕಡೆ ಹೊರಟಿದ್ದ ಟ್ರ್ಯಾಕ್ಟರ್ ಹಾಗೂ ವಿಜಯಪುರ ಮಾರ್ಗದಿಂದ ಕಲಬುರಗಿ ಮಾರ್ಗದ ಕಡೆ ಹೊರಟಿದ್ದ ಸೀಮೆಂಟ್ ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

WhatsApp Group Join Now
Telegram Group Join Now
Share This Article